Tuesday, January 21, 2025
ಪುತ್ತೂರು

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಮಾಧ್ಯಮ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ, ‘ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ‘ಅಕ್ಷರೋದ್ಯಮ’ದ ಮಾಲಿಕ ಸುನಿಲ್ ಕುಲಕರ್ಣಿ ಉಪಸ್ಥಿತರಿದ್ದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು. ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ‘ಅಕ್ಷರೋಧ್ಯಮ’ದ ಮಾಲಿಕ ಸುನಿಲ್ ಕುಲ್ಕರ್ಣಿ ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು ಎನ್ನುವ ಕುರಿತಾಗಿ ಮಾಹಿತಿ ನೀಡಿದರು. ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಅಜಯ್‍ಶಾಸ್ತ್ರಿ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.