Sunday, November 24, 2024
ಬೆಂಗಳೂರು

ನಾಳೆಯಿಂದ ಪ್ರಾಥಮಿಕ ಶಾಲೆ ಆರಂಭಕ್ಕೆ  ಗೈಡ್‍ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ ಕಾರಣದಿಂದ ಸುಮಾರು 20 ತಿಂಗಳು ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ತೆರೆಯಲಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮಕ್ಕಳು ಕೂಡಾ ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.

ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿದ್ದು ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗಿದ್ದು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕಾಗಿದೆ . ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್ ಗೆ ಅವಕಾಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ. ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ಬೇಕು. ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ದೃಢೀಕರಿಸಬೇಕು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೆ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ. 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ ನೀಡಲಾಗಿದೆ.