Sunday, November 24, 2024
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಜಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ ಮತ್ತು ಅದರ ತಯಾರಿ ಎನ್ನುವ ವಿಷಯದ ಬಗ್ಗೆ ವಿಚಾರ ಸಂಕಿರಣವು ಐಎಸ್‍ಟಿಇ ಘಟಕದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆಯಿತು.

ಗೋಷ್ಟಿಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ.ಬಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವೈದ್ಯರುಗಳು, ಇಂಜಿನಿಯರುಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಹೆಚ್ಚು ಬಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ತನಗೆ ಸರ್ಕಾರೀ ಉದ್ಯೋಗವೇ ಬೇಕು ಎನ್ನುವವರ ಸಂಖ್ಯೆ ಬಹಳವಾಗಿದ್ದರೂ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವವರ ಸಂಖ್ಯೆ ಅತಿ ವಿರಳ, ದೇಶದ ಉನ್ನತ ಸರ್ಕಾರಿ ಹುದ್ದೆಗಳನ್ನು ಪಡೆಯಲು ನಡೆಸುವ ಈ ಪರೀಕ್ಷೆಗಳು ಅತಿ ಕಠಿಣವೆನಲ್ಲ ಬದಲಿಗೆ ನಿರ್ಧಿಷ್ಟವಾದ ಗುರಿ ಮತ್ತು ನಿಯಮಿತವಾದ ತಯಾರಿಯೊಂದಿಗೆ ಇದನ್ನು ಸಾಧಿಸಬಹುದು ಎಂದರು. ಈ ಪರೀಕ್ಷೆಗಳ ಪಠ್ಯಕ್ರಮ ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ಬೆಳಕು ಚೆಲ್ಲಿದ ಇವರು ಸಾಧಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಕರೆ ನೀಡಿದರು. ತೃತೀಯ ವರ್ಷದ 107 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡರು. ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಸಂಯೋಜಕ ಡಾ.ಮನುಜೇಶ್.ಬಿ.ಜೆ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊ. ತಪಸ್ವಿನಿ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು