Recent Posts

Monday, January 20, 2025
ಕ್ರೈಮ್

ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಕಾಲೇಜಿನ ದೈಹಿಕ ನಿರ್ದೇಶಕನಿಂದ ದೈಹಿಕ ಸಂಪರ್ಕಕ್ಕೆ ಒತ್ತಾಯ ; ನೊಂದ ವಿದ್ಯಾರ್ಥಿನಿಯಿಂದ ದೂರು, ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ದರ್ಬೆಯ ಪ್ರತಿಷ್ಠಿತ ಅನೇಕ ಚಲನಚಿತ್ರಗಳು ಚಿತ್ರೀಕರಣ ಗೊಂಡ ಇತಿಹಾಸ ಇರುವ ಕಾಲೇಜೊಂದರ ದೈಹಿಕ ಶಿಕ್ಷಕ ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಅ.25 ರಂದು ಪುತ್ತೂರಿನಲ್ಲಿ ತಿಳಿದು ಬಂದಿದೆ.

ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ದೈಹಿಕ ಶಿಕ್ಷಕ ಅದೇ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ ಎಂದು ಮಾಹಿತಿ ತಿಳಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು