Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ತೂರಿನ ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ; ಕೇಸ್ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಕಾಮುಕ ಪಿಂಟೋನ ಹೆಡೆಮುರಿಕಟ್ಟಿದ ದಕ್ಷ ಅಧಿಕಾರಿ ತಿಮ್ಮಪ್ಪ ನಾಯಕ್ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.೨೩ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.೨೫ರಂಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಬಂಧಿಸಲಾಗಿದೆ. ಸೊಂಟ ನೋವು ಎಂದು ಹೇಳಿದ್ದ ವಿದ್ಯಾರ್ಥಿನಿಗೆ ಎಲ್ಯಾಸ್ ಪಿಂಟೋರವರು ವ್ಯಾಯಾಮ ಮಾಡಿಸುವ ನೆಪವೊಡ್ಡಿ ಈ ವೇಳೆ ಆಕೆಯ ಸೊಂಟ ಇತ್ಯಾದಿ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಹಾಗೂ ಈ ಹಿಂದೆ ಅನೇಕ ವಿದ್ಯಾರ್ಥಿನಿಯರೊಂದಿಗೂ ಈತ ಅನುಚಿತವಾಗಿ ವರ್ತಿಸಿದ್ದಲ್ಲದೆ. ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದ ಎಂಬ ಆರೋಪವೂ ಈಗ ಬೆಳಕಿಗೆ ಬರುತ್ತಿದೆ. ಒಟ್ಟಿನಲ್ಲಿ ಕಾಮುಕ ಶಿಕ್ಷಕನಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ, ಈ ವಿದ್ಯಾಸಂಸ್ಥೆಯಲ್ಲಿ ಮಹಿಳಾ ದೈಹಿಕ ಶಿಕ್ಷಕರು ಇಲ್ಲ ಎಂಬ ಆರೋಪವೂ ಕೇಳಿಬರುತ್ತಿದ್ದು, ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು