Recent Posts

Sunday, January 19, 2025
ಪುತ್ತೂರು

ಪುತ್ತೂರು :-ಬಡಗನ್ನೂರು ತೋಟದ ಕೆಲಸಕ್ಕೆ ಹೋಗುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಮಗುವಿಗೆ ಜನ್ಮ ನೀಡಿದ ಪ್ರಕರಣ – ಸಂತ್ರಸ್ತೆಯ ಮನೆಗೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪ್ರಮುಖರ ಭೇಟಿ – ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಅ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಹಿನ್ನಲೆ ಇಂದು ಅವರ ಮನೆಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಭೇಟಿ ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬಾಲಕಿ ಹಾಗೂ ಅವರ ಮನೆಯವರಿಗೆ ಧ್ಯೆರ್ಯ ತುಂಬಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಬಾಲಕಿ ಹೇಳುತ್ತಿರುವ ನಾರಾಯಣ ರೈ ಎಂಬ ವ್ಯಕ್ತಿಯನ್ನು ಶೀಘ್ರದಲ್ಲಿ ಬಂಧಿಸಿ ಸೂಕ್ತ ತನಿಖೆಗೆ ಒಳಪಡಸಿ ಬಾಲಕಿಗೆ ನ್ಯಾಯ ಒದಗಿಸಬೇಕೆಂದು ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸ್ ಠಾಣೆಗೆ ತೆರಳಿ ಪೋಲಿಸರನ್ನು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷತ್ ಪುತ್ತೂರು ಪ್ರಖಂಡ ಅಧ್ಯಕ್ಷರಾದ ಜನಾರ್ಧನ ಬೆಟ್ಟ,ಬಜರಂಗದಳ ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್,ಪುತ್ತೂರು ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ಭರತ್ ಬಲ್ನಾಡ್,ಯೋಗೀತ್ ಬಲ್ನಾಡ್,ಜಗದೀಶ್ ಕೊಯಿಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು