Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ” ಪುತ್ತೂರಿನ ಫಿಲೋಮಿನಾ ಕಾಲೇಜಿನ ವಿಕೃತ ಕಾಮಿ ಶಿಕ್ಷಕ ಪಿಂಟೋ ವಿರುದ್ಧ ನಾಳೆ ಬೆಳಗ್ಗೆ 10.30ಕ್ಕೆ ABVP ಪ್ರತಿಭಟನೆ ” – ABVP ಯಿಂದ ಪ್ರಕಟಣೆ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ನಿನ್ನೆ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ನೀಡಲಾಗಿದೆ.

ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.೨೩ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಅ.೨೫ರಂಂದು ಸಂಜೆ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ನೇತೃತ್ವದಲ್ಲಿ ಬಂಧಿಸಲಾಗಿದೆ. ಸೊಂಟ ನೋವು ಎಂದು ಹೇಳಿದ್ದ ವಿದ್ಯಾರ್ಥಿನಿಗೆ ಎಲ್ಯಾಸ್ ಪಿಂಟೋರವರು ವ್ಯಾಯಾಮ ಮಾಡಿಸುವ ನೆಪವೊಡ್ಡಿ ಈ ವೇಳೆ ಆಕೆಯ ಸೊಂಟ ಇತ್ಯಾದಿ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಹಾಗೂ ಈ ಹಿಂದೆ ಅನೇಕ ವಿದ್ಯಾರ್ಥಿನಿಯರೊಂದಿಗೂ ಈತ ಅನುಚಿತವಾಗಿ ವರ್ತಿಸಿದ್ದಲ್ಲದೆ. ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದ ಎಂಬ ಆರೋಪವೂ ಈಗ ಬೆಳಕಿಗೆ ಬರುತ್ತಿದೆ. ಒಟ್ಟಿನಲ್ಲಿ ಕಾಮುಕ ಶಿಕ್ಷಕನಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ, ಈ ವಿದ್ಯಾಸಂಸ್ಥೆಯಲ್ಲಿ ಮಹಿಳಾ ದೈಹಿಕ ಶಿಕ್ಷಕರು ಇಲ್ಲ ಎಂಬ ಆರೋಪವೂ ಕೇಳಿಬರುತ್ತಿದ್ದು, ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಾಗಿದೆ.

ಈ ಮಧ್ಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಪುತ್ತೂರಿನ ತಾಲೂಕು ತಹಸೀಲದಾರ್ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ABVP ತಿಳಿಸಿದೆ.

” ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ ಫಿಲೋಮಿನಾ ಕಾಲೇಜಿನ ವಿಕೃತ ಕಾಮಿ ಶಿಕ್ಷಕನ ವಿರುದ್ಧ ABVP ವತಿಯಿಂದ ತಹಸೀಲದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ” – ಎಂದು ಪ್ರಕಟಣೆಯಲ್ಲಿ ಬರೆಯಲಾಗಿದೆ.