Wednesday, January 22, 2025
ಬಂಟ್ವಾಳ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಬಾಲಕ ವಿಹಾಂಗ್ ಪೂಜಾರಿ ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯಿಂದಚಿಕಿತ್ಸೆಗೆ ನೆರವು – ಕಹಳೆ ನ್ಯೂಸ್

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ಮಜಲು ಮನೆ, ಚಂದ್ರಶೇಖರ್ ಎಮ್ ಪೂಜಾರಿಯವರ ಮಗನಾದ ವಿಹಾಂಗ್ ಪೂಜಾರಿ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು ಮಗುವಿನ ಮುಂದಿನ 3 ತಿಂಗಳುಗಳ ಚಿಕಿತ್ಸಾ ವೆಚ್ಚವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಂಟ್ವಾಳ ಬಿಜೆಪಿ ಕ್ಷೇಮ ನಿಧಿಯ ಮೂಲಕ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಪ್ರ.ಕಾರ್ಯದರ್ಶಿ ಡೊಂಬಯ ಅರಳ,ರವೀಶ್ ಶೆಟ್ಟಿ,ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು,ಚಿದಾನಂದ ರೈ ಕಕ್ಯಪದವು,ಆನಂದ ಶಂಭೂರು,ಪ್ರದೀಪ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು