ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು.
ವಿಚಾರ ಸಂಕಿರಣದ ಸಂವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ವೇಣೂರಿನ ಸರಕಾರಿ ಆಸ್ಪತ್ರೆಯ ಡಾಕ್ಟರ್ ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವ ಮಾದಕ ದ್ರವ್ಯಗಳು, ವಿವಿಧ ವ್ಯಸನಗಳ ಕುರಿತಾಗಿ ಮಾಹಿತಿ ನೀಡಿ, ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವು ನೆರವೇರಿತು. ಬಳಿಕ ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಫಲ ಪುಷ್ಪಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲರಾದ ಗಂಗಾಧರ್ ವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘ, ಮಂಗಳೂರು ಜಿಲ್ಲಾ ಅಧ್ಯಕ್ಷ ಸುದೇಶ್ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್ ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ವೇಣೂರು ಆಡಳಿತ ಮಂಡಳಿ ಉಪಾಧ್ಯಕ್ಷ ಸುಂದರ್, ಹಗ್ನ ಶುಭನುಡಿಗಳನ್ನು ನೀಡುತ್ತಾ ಪುಸ್ತುತ ದಿನಗಳಲ್ಲಿ ಈ ಕಾರ್ಯಕ್ರಮ ಬಹಳ ಪುಶಸ್ತವಾಗಿದೆ ಎಂದು ಶ್ಲಾಘಿಸಿದರು.
ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷ ವೆಂಕಟೇಶ ಬೆಂಡೆಯವರು ಕಾರ್ಯಕ್ರಮ ಸ್ವಾಗತಿಸಿದರು. ಕರ್ನಾಟಕ ಪತ್ರಕರ್ತರ ಸಂಘ ಬೆಂಗಳೂರು ಪುಟಕದ ದತ್ತಾತ್ರ ಹೆಗಡೆಯವರು ಕಾರ್ಯಕ್ರಮದಲ್ಲಿ ವ್ಯವಸ್ಥೆಯನ್ನು ನೋಡಿಕೊಂಡರು. ಬಂಟ್ವಾಳದ ಪತ್ರಕರ್ತರಾದ ಲತೀಫ್ ವಂದಿಸಿದರು. ಕಾಲೇಜಿನ ವೆಂಕಟೇಶ್ ಪಿ ಕಾರ್ಯಕ್ರಮ ನಿರೂಪಿಸಿದರು.