ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಆನ್ ಲೈನ್ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕ, ರಕ್ಷಕರ ಪಾತ್ರ ಕಾರ್ಯಾಗಾರ ವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು.
ಸಂವಾದ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆ, ವೃತ್ತ ನಿರೀಕ್ಷಕರಾದ ರೇವತಿಯವರು ಭಾಗವಹಿಸಿ ಮೊಬೈಲ್ ನಿಂದ ಆಗುವ ಸಾಧಕ-ಭಾಧಕಗಳ ಕುರಿತು ಸಂವಾದದ ಮೂಲಕ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಬಳಿಕ ವೇದಿಕೆಯಲ್ಲಿ ರೇವತಿ ಅವರಿಗೆ ಶಾಲು ಫಲ-ಪುಷ್ಪಗಳೊಂದಿಗೆ ಗೌರವ ಸಲ್ಲಿಸಲಾಯಿತು.
ಸಭಾಧ್ಯಕ್ಷತೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜ್ ಬೆಳ್ತಂಗಡಿಯ ಪ್ರಾಂಶುಪಾಲರಾದ ಸುಕುಮಾರ್ ಜೈನ್ ರವರು ವಹಿಸಿ ವಿದ್ಯಾರ್ಥಿಗಳಿಗೆ ಹಿತ ನುಡಿಗಳನ್ನಾಡುವ ಮೂಲಕ ಕಾರ್ಯಕ್ರಮವನ್ನು ಛಂದಗಾಣಿಸಿಕೊಟ್ಟರು.
ಈ ಸಂದರ್ಭದಲ್ಲಿ ಕರ್ನಾಟಕ ಪತ್ರಕರ್ತರ ಸಂಘ, ಮಂಗಳೂರು ಜಿಲ್ಲಾ ಅಧ್ಯಕ್ಷ ಸುದೇಶ್ ಕುಮಾರ್ ಉಪಸ್ಥಿತರಿದ್ದರು. ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷ ವೆಂಕಟೇಶ ಬೆಂಡೆಯವರು ಕಾರ್ಯಕ್ರಮ ಸ್ವಾಗತಿಸಿದರು. ಕರ್ನಾಟಕ ಪತ್ರಕರ್ತರ ಸಂಘ ಬೆಂಗಳೂರು ಪುಟಕದ ದತ್ತಾತ್ರ ಹೆಗಡೆಯವರು ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದ ಸಮರ್ಪಿಸಿದರು.