Monday, January 20, 2025
ಸುದ್ದಿ

ಟ್ಯಾಕ್ಸಿ ಸ್ಟ್ಯಾಂಡಿನ ಮೇಲ್ಛಾವಣಿಯನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಪಿ.ವಿ.ಎಸ್ ಬಳಿಯಿರುವ ಟ್ಯಾಕ್ಸಿ ಸ್ಟ್ಯಾಂಡಿನ ಮೇಲ್ಛಾವಣಿ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, ಕಳೆದ ಅನೇಕ ವರ್ಷಗಳಿಂದ ಕಾರ್ಯಚರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಮ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅವರ ಟ್ಯಾಕ್ಸಿ ಸ್ಟಾಂಡಿಗೆ ಮೇಲ್ಛಾವಣಿ ಅಳವಡಿಸುವ ಕುರಿತು ಅಸೋಸಿಯೇಷನ್‍ನ ಪ್ರಮುಖರು ಮನವಿ ಸಲ್ಲಿಸಿದ್ದರು. ಹಾಗಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಿ ಮೇಲ್ಛಾವಣಿ ನಿರ್ಮಿಸಲಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ, ಟ್ಯಾಕ್ಸಿ ಸಂಘದ ಗೌರವಾಧ್ಯಕ್ಷರಾದ ಮೋನಪ್ಪ ಭಂಡಾರಿ, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ, ದ.ಕ.ಜಿಲ್ಲಾ ಟ್ಯಾಕ್ಸಿಮೆನ್ಸ್ ಅಸೋಸಿಯೇಶನ್ ನ ಅಧ್ಯಕ್ಷರಾದ ದಿನೇಶ್ ಕುಂಪಲ, ಕಾರ್ಯಾಧ್ಯಕ್ಷ ಪ್ರಮೋದ್ ಕುಮಾರ್ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಆನಂದ್. ಕೆ, ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮಹಾ ಗಣಪತಿ ಸೇವಾ ಸಮಿತಿ ಶೇಡಿಗುಡ್ಡೆ ಇದರ ಅಧ್ಯಕ್ಷರಾದ ಸುಂದರ್ ಶೆಟ್ಟಿ, ಹಾಗೂ ಟ್ಯಾಕ್ಸಿಮನ್ ಅಸೋಸಿಯೇಶನ್ ನ ಪದಾಧಿಕಾರಿಗಳು ಮತ್ತು ಸೆಂಟ್ರಲ್ ವಾರ್ಡ್ ನ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು .

ಜಾಹೀರಾತು
ಜಾಹೀರಾತು
ಜಾಹೀರಾತು