ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಸಾಧನೆಗೈದ ವೆನಿಲ್ಲಾ ಮಣಿಕಂಠ ಇವರಿಗೆ ಅಭಿನಂದನೆ ಸಲ್ಲಿಸಿದ ಡಾ | ಪ್ರಭಾಕರ ಭಟ್ ಕಲ್ಲಡ್ಕ- ಕಹಳೆ ನ್ಯೂಸ್
ಬಂಟ್ವಾಳ: ವಿಶಾಖ ಪಟ್ಟಣದಲ್ಲಿ ಅ.21 ಮತ್ತು 22ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿನಿಯಾಗಿದ್ದ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಮತ್ತು ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ.
ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮ ಕ್ರೀಡೋತ್ಸವದಲ್ಲಿ ಜೂಡೋ, ಕರಾಟೆ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರಲ್ಲದೆ, ವಿದ್ಯಾಭ್ಯಾಸದ ಸಂದರ್ಭದಲ್ಲಿ ಜೂಡೋ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ವಿದ್ಯಾಕೇಂದ್ರದ ಹಿರಿಯರಾದ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಶಾಲು ಹೊದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು