Sunday, November 24, 2024
ಸುದ್ದಿ

ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ – ಕಹಳೆ ನ್ಯೂಸ್

ಸರಕಾರಿ ಕಿರಿಯ ಪ್ರಾಥಮಿಕ ನೆತ್ತರದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಉಮಾನಾಥ ಪೂಜಾರಿಯವರ ಅಧ್ಯಕ್ಷತೆಯಲ್ಲಿ ವಿದ್ಯಾ ಸಿರಿ ಯೋಜನೆಯಡಿಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ನಾಟ್ಯ ತರಗತಿಯು ಉದ್ಘಾಟನೆ ಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರುಕ್ಮಿಣಿ ನೆತ್ತರ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಪ್ರೋತ್ಸಾಹ ನಮ್ಮಿಂದಾಗ ಬೇಕು. ಈ ನಿಟ್ಟಿನಲ್ಲಿ ನೆತ್ತರ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಎಳೆಯ ವಯಸ್ಸಿನಲ್ಲಿ ಕಲಿಸುತ್ತಿರುವ ಕೆಲಸ ಶ್ಲಾಘನೀಯವಾದುದು ಎಂದು ಹೇಳಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪೋಷಕರಾದ ಮಹಾಬಲ ದೇವಾಡಿಗ ನೆತ್ತರ, ನೆತ್ತರ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೀತಲತಾ, ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಬೆಳಾಲು ಮೊದಲಾದವರು ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಕುಮಾರಿ ಚಿರಂಜಿನಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಶಾಲಾ ಸಹಶಿಕ್ಷಕಿ ಶ್ರೀಮತಿ ರೂಪಾ ರುಫೀನಾ ರೊಡ್ರಿಗಸ್ ಧನ್ಯವಾದವಿತ್ತರು.