Sunday, November 24, 2024
ಬಂಟ್ವಾಳ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ನೂತನ ಸಮಿತಿ ರಚನೆಯ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದ, ಮಾಜಿ ಶಾಸಕರು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ರುಕ್ಮಯ ಪೂಜಾರಿ ಜನಜಾಗೃತಿ ಸಮಿತಿಯ ಕೆಲಸಗಳು ಗ್ರಾಮಮಟ್ಟದಲ್ಲಿ ಯಶಸ್ವಿಯಾಗಿ ನಡೆದಾಗ ಆರೋಗ್ಯ ಪೂರ್ಣವಾದ ಪರಿವರ್ತನೆ ಸಮಾಜದಲ್ಲಿ ಆಗಲು ಸಾಧ್ಯ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ಯೋಜನಾಧಿಕಾರಿ ಚನ್ನಪ್ಪಗೌಡ ಜನಜಾಗೃತಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತ ಸಮಾಜದಲ್ಲಿ ಉತ್ತಮ ಬೆಳವಣಿಗೆಯನ್ನು ತರುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಯೋಜನೆಯ ಶಿಬಿರಾಧಿಕಾರಿಯಾದ ದಿವಾಕರ ಪೂಜಾರಿಯವರು ಕಾಲ ಬದಲಾದಂತೆ ವ್ಯವಸ್ಥೆಯ ಒಳಗೆ ಸದಾ ಚಲನಶೀಲತೆ ಇರಬೇಕು ಎಂದು ಹೇಳಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಕಲ್ಲಡ್ಕ ವಲಯದ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಹಿಸಿದ್ದರು .

ವೇದಿಕೆಯಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಲಾಶ್ ಶೆಟ್ಟಿ, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ,ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಿರಣ್ಮಯಿ, ಜನಜಾಗೃತಿ ವೇದಿಕೆಯ ಸದಸ್ಯರಾದ ಇದಿನಬ್ಬ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಕೌಶಿತ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋದ ವಂದಿಸಿದರು ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಲ್ಲಡ್ಕ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಕಲ್ಲಡ್ಕ ವಲಯದ ಗಣ್ಯರು ಹಾಗೂ ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.