Wednesday, January 22, 2025
ಸುದ್ದಿ

ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್. ಅಂಗಾರ- ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಬಳಿಕ ಮಾತನಾಡಿದ ಸಚಿವರು, ಕನ್ನಡ ರಾಜ್ಯೋತ್ಸವ ಶುಭಾಶಯಗಳನ್ನು ತಿಳಿಸಿ, ಕೋವಿಡ್-19 ಸೋಂಕಿನ ಎರಡನೇ ಅಲೆ ನಿರ್ವಹಣೆಯಲ್ಲಿ ಜೀವದ ಹಂಗು ತೊರೆದು ತಮ್ಮನ್ನು ತೊಡಗಿಸಿಕೊಂಡಿರುವ ವೈದ್ಯರು, ಶುಶ್ರೂಷಕರು, ಇತರ ವೈದ್ಯಕೇತರ ಸಿಬ್ಬಂದಿ, ಪೊಲೀಸರು, ಜಿಲ್ಲಾ ಆಡಳಿತ, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು