Thursday, January 23, 2025
ಹೆಚ್ಚಿನ ಸುದ್ದಿ

ಶ್ರೀರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯು ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ರಾವ್ ಆತೂರು ಧ್ವಜಾರೋಹಣವನ್ನು ನೆರವೇರಿದರು. ಆನಂತರ ಅವರು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಕನ್ನಡದ ಪರವಾದ ಚಿಂತನೆಗಳನ್ನು ಮಾಡಬೇಕು.

ಸತತ ಅಧ್ಯಯನವನ್ನು ಮಾಡಿ ಕನ್ನಡವನ್ನು ಉಳಿಸಿ ಬೆಳೆಸಬೇಕು. ಪಂಪ ರನ್ನರಂತೆ ನೀವೂ ಸಹ ಸಾಧನೆಯನ್ನು ಮಾಡಿ ಕನ್ನಡ ಮಾತೆಯ ಸೇವೆಯನ್ನು ಮಾಡಬೇಕು ಎಂದು ಹೇಳಿದರು. ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಇವರು ವಿದ್ಯಾರ್ಥಿಗಳು ಸಾಹಿತ್ಯದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಕನ್ನಡ ಸಾಹಿತ್ಯದ ಸತ್ವವನ್ನು ಅರಿಯಬೇಕು. ಯಾವಾಗ ಒಂದು ಭಾಷೆ ಉಳಿಯುವುದೋ ಆವಾಗ ನಾಡಿನ ಸಂಸ್ಕøತಿ ಉಳಿಯುವುದು ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಧಾಕೃಷ್ಣ ಎಂ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಕು.ಶ್ರೇಯ ಸಿ ಎಚ್ ಮತ್ತು ತಂಡದವರು ಪ್ರಾರ್ಥನೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು