Monday, January 20, 2025
ರಾಷ್ಟ್ರೀಯಸುದ್ದಿ

ದೀಪಾವಳಿ ಹಬ್ಬಕ್ಕೆ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಸರಕಾರ ; ಡೀಸೆಲ್ – ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ – ಕಹಳೆ ನ್ಯೂಸ್

ನವದೆಹಲಿ, ನ. 03 : ವಾಹನ ಸವಾರರಿಗೆ ಮೋದಿ ನೇತೃತ್ವದ ಕೇಂದ್ರ ಸರಕಾರ ಶುಭ ಸುದ್ದಿ ನೀಡಿದೆ. ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸವಾರರು ಅಲ್ಪ ನಿಟ್ಟುಸಿರು ಬಿಡುವಂತಾಗಿದ್ದು, ದೀಪಾವಳಿ ವೇಳೆಗೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಅಲ್ಪ ಕಡಿಮೆ ಮಾಡಿ ಉಡುಗೊರೆ ನೀಡಿದೆ.

ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ. ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ನಿರ್ಧಾರವಾಗುತ್ತದೆ. ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು