Recent Posts

Sunday, January 19, 2025
ರಾಜಕೀಯ

Big News : ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದ ಬಿಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು:ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸರ್ಕಾರ ರಚಿಸಲು ಕಸರತ್ತು ನಡೆಯುತ್ತಿದ್ದರೆ, ಮತ್ತೊಂದೆಡೆ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಹೊರಟ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು. ಕಾಂಗ್ರೆಸ್ ಪಕ್ಷ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು