Monday, January 20, 2025
ಸುದ್ದಿ

ವಿಳಂಬವಾಗುತ್ತಿರುವ ಮುಕ್ಕ ಜಂಕ್ಷನ್‍ನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ – ಅಧಿಕಾರಿಗಳನ್ನ ಕರೆದು ಸೂಕ್ತ ಕಾಮಗಾರಿ ನಡೆಸಲು ಸೂಚನೆ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮುಕ್ಕ ಜಂಕ್ಷನ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಅನಿರುದ್ಧ ಅವರಿಗೆ ಸೂಚಿಸಿದರು. ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಆ ಪರಿಸರದ ಡಿವೈಡರ್ ಮೇಲೆ ಬೀದಿದೀಪಗಳನ್ನು ಶೀಘ್ರದಲ್ಲಿಯೇ ಅಳವಡಿಸುವಂತೆ ಮತ್ತು ಮುಕ್ಕ ಜಂಕ್ಷನ್ ನಲ್ಲಿ ಸರ್ವೀಸ್ ರಸ್ತೆ ನಿರ್ಮಾಣದ ಕಾಮಗಾರಿಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮೀಪದ ಕಾಲೇಜಿನ ಬಳಿ ಕೆಲವರು ರಾತ್ರಿ ವಿನಾಕಾರಣ ಬೈಕುಗಳಲ್ಲಿ ಅಡ್ಡಾಡುತ್ತಿರುವುದರ ಬಗ್ಗೆ ಸ್ಥಳೀಯರು ಆಕ್ಷೇಪ ಸಲ್ಲಿಸಿರುವುದನ್ನು ಶಾಸಕರು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ರಾತ್ರಿ ಪೆಟ್ರೋಲಿಂಗ್ ನಡೆಸುವಂತೆ ಮತ್ತು ಸ್ಥಳೀಯ ನಾಗರಿಕರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು