Recent Posts

Sunday, January 19, 2025
ಕಡಬ

ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಕಡಬದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಬೃಹತ್ ಜನಜಾಗೃತಿ ಸಮಾವೇಶ- ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡದ ನೇತೃತ್ವದಲ್ಲಿ ನಾಳೆ ಕಡಬದಲ್ಲಿ ರಾಜ್ಯದಲ್ಲಿ ಶೀಘ್ರವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನಜಾಗೃತಿ ಸಭೆ ನಡೆಯಲಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ 3:30 ಕ್ಕೆ ಸರಿಯಾಗಿ ಕಡಬ ವೃದ್ಧಿ ಹೋಟೆಲ್ ಮುಂಭಾಗದಿಂದ ಮೆರವಣಿಗೆಯ ಮೂಲಕ ಶ್ರೀ ದುರ್ಗಾಂಬಿಕಾ ದೇವಾಲಯದ ಅವರಣಕ್ಕೆ ಜಾಗೃತಿ ಜಾಥಾ ನಡೆಯಲಿರುವುದು.

ನಂತರ 4:00 ಗಂಟೆಗೆ ಕಡಬ ಶ್ರೀ ದುರ್ಗಾಂಬಿಕಾ ದೇವಾಲಯದ ಆವರಣದಲ್ಲಿ ನಡೆಯುವ ಜನಜಾಗೃತಿ ಸಮಾವೇಶದಲ್ಲಿ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ,ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ ಶ್ರೀ ಕ್ಷೇತ್ರ ಕರಿಂಜೆ ಮಠ ಇವರು ದಿವ್ಯ ಉಪಸ್ಥಿತಿ ಹಾಗೂ ಜಾಗೃತಿ ಸಂದೇಶ ನೀಡಲಿದ್ದಾರೆ.

ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ ಪುರಾಣಿಕ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು,ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರು ಸಮಾವೇಶ ಭಾಷಣ ಮಾಡಲಿದ್ದಾರೆ.

ಈ ಬೃಹತ್ ಸಮಾವೇಶದಲ್ಲಿ ಹಿಂದೂ ಬಂಧುಗಳು,ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಡಾ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ,ಎಸ್ ಹಾಗೂ ಬಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೇಲ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.