ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸನಿಹ ಅರಬ್ಬಿ ಸಮುದ್ರದಲ್ಲಿ ಬೋಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ಪಡೆ ರಕ್ಷಿಸಿದೆ.
ಮಲ್ಪೆ ಮೂಲದ “ವರದ ವಿನಾಯಕ ” ಎಂಬ ಹೆಸರಿನ ಬೋಟ್ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟ್ ನ ಇಂಜಿನ್ ರೂಮ್ ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಭಾರತೀಯ ಕರಾವಳಿ ಪಡೆ ಕಾರ್ಯಾಚರಣೆ ಆರಂಭಿಸಿ ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದೆ.