Thursday, January 23, 2025
ದಕ್ಷಿಣ ಕನ್ನಡ

ಇಂದಿನಿಂದ ಪೂರ್ವ ಪ್ರಾಥಮಿಕ ಹಾಗೂ ಅಂಗನವಾಡಿಗಳು ಆರಂಭ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಹಾಗೂ ಅಂಗನವಾಡಿಗಳು ಆರಂಭಗೊಳ್ಳಲಿದೆ.
ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಬಹುದಾಗಿದ್ದು, ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30 ರಿಂದ ಅಪರಾಹ್ನ 3.30 ರವರೆಗೆ ನಡೆಸಲು ಸೂಚನೆ ನೀಡಲಾಗಿದೆ.
ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದ ಭೌತಿಕ ತರಗತಿಗಳು ನಡೆದಿಲ್ಲವಾದ್ದರಿಂದ ಪುಟಾಣಿ ಮಕ್ಕಳು ಮೊದಲ ಬಾರಿ ಶಾಲೆಗೆ ಆಗಮಿಸುತ್ತಿರುವುದರಿಂದ ಶಾಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರದ ಮುಂದಿನ ಸೂಚನೆಯವರೆಗೆ ಪೌಷ್ಟಿಕ ಆಹಾರಗಳನ್ನು ಮನೆಗೆ ನೀಡಲಾಗುವುದು.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು