Recent Posts

Monday, January 20, 2025
ಪುತ್ತೂರು

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆ- ಕಹಳೆ ನ್ಯೂಸ್

ಪುತ್ತೂರು : ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ನ.8 ರಂದು 2021-22ನೇ ಸಾಲಿನ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಕರೆಯಲಾಗಿತ್ತು. ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಜ್ಯೋತಿರವರ ಪ್ರಾರ್ಥನೆಯ ಮೂಲಕ ಆರಂಭಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಹೇಮಲತಾಗೋಕುಲ್ ವಿಧ್ಯಾರ್ಥಿಗಳು ಹಾಗೂ ಪಾಲಕರ ಜವಾಬ್ದಾರಿಯ ಕುರಿತು, ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾಹಿತಿಯನ್ನು ನೀಡಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಉಪಸ್ಥಿತರಿದ್ದ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಹರಿಪ್ರಸಾದ್ ಕಂಪ್ಯೂಟರ್ ಶಿಕ್ಷಣದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿಯಾದ ಶ್ರೀಮತಿ ಸಂಹಿತ ಇವರು ವಿಧ್ಯಾರ್ಥಿಗಳಿಗೆ ಸಮಯ ಹಾಗೂ ಹಣದ ಮೌಲ್ಯದ ಕುರಿತು ಮಾಹಿತಿಯನ್ನು ನೀಡುವ ಮೂಲಕ ಪಾಲಕರ ಜವಾಬ್ದಾರಿಯನ್ನು ತಿಳಿಸಿಕೊಟ್ಟರು.

ಸಭೆಯಲ್ಲಿ ಉಪಸ್ಥಿತರಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಶ್ರವಣ್‍ಕುಮಾರ್ ರವರ ತಂದೆ ಜಗದೀಶ್ ಮಾತನಾಡಿ ಪ್ರಗತಿ ಸ್ಟಡಿ ಸೆಂಟರ್ ಇನ್ನೂ ಹೆಚ್ಚು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುವ ಮೂಲಕ ಹಲವಾರು ಮಕ್ಕಳಿಗೆ ದಾರಿದೀಪವಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ಪ್ರಮೀಳ .ಎನ್.ಡಿ. ಕಾರ್ಯಕ್ರಮವನ್ನು ನಿರೂಪಿಸಿ, ಗಣಿತ ಉಪನ್ಯಾಸಕಿಯಾದ ಕುಮಾರಿ ರಕ್ಷಾ ಸ್ವಾಗತಿಸಿದರು.ಅರ್ಥಶಾಸ್ತ್ರ ಉಪನ್ಯಾಸಕಿಯಾದ ಕುಮಾರಿ ದೀಪ್ತಿ ವಂದಿಸಿದರು.