Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡ

ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗಕಾಮದ ಸಂದೇಶ ; ಆರೋಪಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು ನವೆಂಬರ್ 10 : ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗ ಕಾಮಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ.

ಆರೋಪಿಗೆ ನಗರದ ಯುವತಿಯೊಬ್ಬಳ ಜೊತೆ ಮದುವೆಗೆ ಮಾತುಕತೆ ನಡೆದಿತ್ತು. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದು, ಇದರ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ದಿನಗಳ ಬಳಿಕ ಯುವತಿಯ ನಂಬರ್ ಪಡೆದುಕೊಂಡ ಶ್ರೀನಿವಾಸ್ ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಅಶ್ಲೀಲ, ವಿಚಿತ್ರ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಚಾರವನ್ನು ಯುವತಿ ಮನೆಯವರ ಗಮನಕ್ಕೆ ತಂದಿದ್ದು, ಕೂಡಲೇ ಕುಟುಂಬಸ್ಥರು ನಿಶ್ಚಿತಾರ್ಥ ಮುಂದೂಡಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಬಳಿಕವೂ ಶ್ರೀನಿವಾಸ್ ಸಲಿಂಗ ಕಾಮಕ್ಕೆ ಸಂಬಂಧಿಸಿದ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದು, ಈ ವರ್ತನೆಯಿಂದ ಮತ್ತಷ್ಟು ನೊಂದುಕೊಂಡ ಯುವತಿ ನಗರದ ಸೈಬರ್ ಠಾಣೆಗೆ ಯುವಕನ ವಿರುದ್ಧ ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.