Recent Posts

Sunday, January 19, 2025
ಪುತ್ತೂರು

ಪುತ್ತೂರಿನ ಮೊಟ್ಟೆತಡ್ಕದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವು- ಕಹಳೆ ನ್ಯೂಸ್

ಪುತ್ತೂರು: ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನ.9ರಂದು ರಾತ್ರಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ ಸ್ಕೂಟರ್‍ನಲ್ಲಿ ಮನೆಗೆ ತೆರಳುತ್ತಿದ್ದಾಗ ಮೊಟ್ಟೆತ್ತಡ್ಕ ತಲುಪುತ್ತಿದ್ದಂತೆ ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ನಾರಾಯಣ ನಾಯ್ಕ ಮತ್ತು ಸಹಸವಾರ ವಸಂತ ರೈ ಅವರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದು, ಸಹಸವಾರ ಧರಿಸಿದ್ದ ಹೆಲ್ಮೆಟ್ ಹುಡಿಯಾಗಿ, ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿರುವ ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸಹ ಸವಾರ ವಸಂತ ರೈ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.