Wednesday, November 20, 2024
ಬೆಳ್ತಂಗಡಿ

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹದಿಹರೆಯದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ- ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆನಕ ಆಸ್ಪತ್ರೆಯ ವೈದ್ಯೆ ಡಾ.ಭಾರತಿ.ಜಿ.ಕೆ. ಯವರು ಪ್ರೌಡಾವಸ್ಥೆಯಲ್ಲಿ ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ದೀರ್ಘಕಾಲೀನ ರೋಗಗಳಿಗೆ ತುತ್ತಾಗುವುದನ್ನು ತಡೆಗಟ್ಟಲು ಹದಿಹರೆಯದಲ್ಲಿಯೇ ಆರೋಗ್ಯಪೂರ್ಣ ಆಹಾರ ಸೇವನೆ ಮತ್ತು ಉತ್ತಮ ವ್ಯಾಯಾಮದ ಅಭ್ಯಾಸಗಳನ್ನು ರೂಪಿಸಬೇಕು. ಕ್ಷಿಪ್ರವಾಗಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಯನ್ನೂ ತಡೆಗಟ್ಟಲು ಕೂಡಾ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರೋತ್ಸಾಹಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಮಾತನಾಡಿದ ಮುಖ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆಯಾದ ಡಾ.ಅಂಕಿತಾ.ಜಿ.ಭಟ್ ಅವರು ಹದಿಹರೆಯದವರ ಆರೋಗ್ಯಕ್ಕೆ ಸಂಬಂಧಿಸಿದ ತೊಂದರೆಗಳು ಉದ್ಭವಿಸಿದಾಗ ಅವುಗಳನ್ನು ಸಮರ್ಥವಾಗಿ ನಿಭಾಯಿಸಲು ಅನುವಾಗುವಂತೆ ಹದಿಹರೆಯದವರ ಆರೋಗ್ಯಕರ ಬೆಳವಣಿಗೆಗೆ ಪೂರಕ ಕ್ರಮಗಳನ್ನು ಕೈಗೊಳ್ಳುವ ಅಗತ್ಯ ಇದೆ. ಅವರಿಗೆ ಅಗತ್ಯ ಮಾಹಿತಿ ನೀಡುವುದು, ಜೀವನ ಕಲೆಗಳನ್ನು ಕರಗತಗೊಳಿಸುವುದು, ಸುರಕ್ಷಿತ ಮತ್ತು ಸಹಾಯಕ ಪರಿಸರ ಒದಗಿಸುವುದು ಹಾಗೂ ಆಪ್ತ ಸಮಾಲೋಚನೆಯ ಸೇವೆಗಳನ್ನು ಒದಗಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ನವೀನಾ ಜೆ.ಕೆ ದೀಪ ಪ್ರಜ್ವಲನ ಮಾಡಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆಯರಾದ ಡಾ.ವಿನಯ ಕಿಶೋರ್ ಹಾಗೂ ಡಾ.ಅಂಕಿತಾ.ಜಿ.ಭಟ್ ಉಚಿತ ತಪಾಸಣೆ ನಡೆಸಿ ಸಲಹೆಯನ್ನು ನೀಡಿದರು.

ಬೆಳ್ತಂಗಡಿ ರೋಟರಿ ಆನ್ಸ್ ಕಾರ್ಯದರ್ಶಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಆನ್ಸ್ ಅಧ್ಯಕ್ಷೆ ನವೀನಾ ಜಯಕುಮಾರ್ ವಂದಿಸಿದರು. ಬೆನಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆನ್ಸ್ ಸದಸ್ಯೆಯರು ಕಾರ್ಯಕ್ರಮದಲ್ಲಿ ಸಹಕರಿಸಿದ್ದರು.