Recent Posts

Monday, January 20, 2025
ಸುದ್ದಿ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಪಿಜಿಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ಮುಂಬರುವ ಪಿಜಿಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್ ಜೀವನದಲ್ಲಿ ಯಶಸ್ಸು ತಾನಾಗಿಯೇ ಬರುವುದಿಲ್ಲ ಸಿಕ್ಕಿದ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಏಳಿಗೆಯನ್ನು ಹೊಂದಬಹುದು. ಶಿಕ್ಷಣ ಕೊಡಿಸುವಲ್ಲಿ ಮಾತಾ-ಪಿತರ ಮತ್ತು ಪೋಷಕರ ಕೊಡುಗೆ ಅಪಾರವಿದೆ ಅದನ್ನು ಮನದಲ್ಲಿಟ್ಟುಕೊಂಡು ಶ್ರಮವಹಿಸಿ ಕಲಿಯುವಂತೆ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಕೊಡುತ್ತದೆ. ಸಾಕಷ್ಟು ಕಂಪೆನಿಗಳು ಕ್ಯಾಂಪಸ್ ನೇಮಕಾತಿಗಾಗಿ ಕಾಲೇಜಿಗೆ ಆಗಮಿಸುತ್ತವೆ ಎಂದರು. ಕಾರ್ಯಾಗಾರದ ಪೂರ್ಣ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳುವಂತೆ ಹೇಳಿದರು.

ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಅಯ್ಯರ್ ಕಾರ್ಯಕ್ರಮದ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು. ಪರೀಕ್ಷೆಗೆ ಅಗತ್ಯ ವಿಷಯಗಳಾದ ಇಂಗ್ಲಿಷ್ ಪ್ರಾವೀಣ್ಯತೆ, ತಾರ್ಕಿಕ ಮತ್ತು ಸಾಮಾನ್ಯ ಬುದ್ದಿವಂತಿಕೆ, ಸಾಮಾನ್ಯ ಜ್ಞಾನ ಮತ್ತು ಪರಿಮಾಣಾತ್ಮಕ ಯೋಗ್ಯತೆಯ ಬಗ್ಗೆ ತರಬೇತಿ ನೀಡಲಾಯಿತು.
ಕಾಲೇಜಿನ ಎಂಸಿಎ ವಿಭಾಗದ ನಿರ್ದೇಶಕಿ ಡಾ. ವಂದನಾ, ಇತರ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದೀಕ್ಷಾ ಶೆಟ್ಟಿ ಸ್ವಾಗತಿಸಿ, ಶ್ವೇತಾ.ಕೆ ವಂದಿಸಿದರು. ಶೀತಲ್ ಕಾರ್ಯಕ್ರಮ ನಿರ್ವಹಿಸಿದರು.