Sunday, January 19, 2025
ಕಾಸರಗೋಡು

ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ಅಭಿನಂದಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್- ಕಹಳೆ ನ್ಯೂಸ್

ಚೆನ್ನೈ: ಸುರಿಯುತ್ತಿರುವ ಭಾರೀ ಮಳೆಯ ನಡುವೆ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿ, ಆಟೋ ಹತ್ತಿಸಿ ಆಸ್ಪತ್ರೆಗೆ ದಾಖಲಿಸಿದ್ದ, ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‍ಸ್ಪೆಕ್ಟರ್ ರಾಜೇಶ್ವರಿ ಅವರು ಖುದ್ದು ತಾವೇ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳುನಾಡಿನ ಮುಖ್ಯಮಂತ್ರಿಯು ಇವರ ಮಾನವೀಯತೆಗೆ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು