Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಇಂದಬೆಟ್ಟು ಕಳ್ಳತನ ಪ್ರಕರಣ : 13.75 ಲಕ್ಷ ಮೌಲ್ಯದ ಸೊತ್ತು ವಶಕ್ಕೆ, ಮಹಮ್ಮದ್ ಸ್ವಲ್ಹಿ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ, ನ. 13 : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು, 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಸುಮಾರು 13,75,930 ರೂ. ಎಂದು ಅಂದಾಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನವನ ಋಷಿಕೇಶ್ ಭಗವಾನ್ ಐ.ಪಿ.ಎಸ್ , ಶಿವಕುಮಾರ್ ಗುಣಾರೆ , ಹೆಚ್ಚುವರಿ ಪೊಲೀಸ್ ಅಧೀಕ್ಷಕರು ರವರುಗಳ ನಿರ್ದೇಶನದಂತೆ ಶಿವಾಂಶು ರಜಪೂತ್ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರು , ರವರ ಸೂಚನೆಯಂತ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ , ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದ ಕುಮಾರ್ , ಪ್ರೊ.ಪಿಎಸ್‌ಐ ಮೂರ್ತಿ , ಎಎಸೈ , ದೇವಪ್ಪ ಎಂಕ , ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್ , ವೃಷಭ , ಪ್ರಮೋದ್ ನಾಯ್ಕ , ಇಬ್ರಾಹಿಂ ಗರ್ಡಾಡಿ , ಲತೀಫ್ , ವಿಜಯ ಕುಮಾರ್ ರೈ , ವೆಂಕಟೇಶ್ , ಬಸವರಾಜ್ , ಚರಣ್ , ಅವಿನಾಶ್ , ವಾಹನ ಚಾಲಕರಾದ ಮಹಮ್ಮದ್ ಆಸೀಫ್ , ಸತೀಶ್ , ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ , ಸಂಪತ್ ಕುಮಾರ್ ಗಳ ಸಹಾಯದಿಂದ ಆರೋಪಿಗಳನ್ನು ಪತ್ತೆ ಮಾಡಿಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪೋಲೀಸ್ ಮೂಲಗಳು ತಿಳಿಸಿವೆ.