Friday, November 22, 2024
ಅಂತಾರಾಷ್ಟ್ರೀಯಸುದ್ದಿ

ಅಪ್ಘಾನ್ ನಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಮಸೀದಿಯಲ್ಲಿ ಬಾಂಬ್ ಸ್ಪೋಟ ; ಮೂವರ ಸಾವು, 15 ಮಂದಿಗೆ ಗಾಯ – ಕಹಳೆ ನ್ಯೂಸ್

ಕಾಬೂಲ್ , ನ 13 : ಪೂರ್ವ ಅಫ್ಘಾನಿಸ್ಥಾನದ ನಂಗರ್‌ಹಾರ್ ಪ್ರಾಂತ್ಯದ ಸ್ಪಿನ್ ಘರ್ ಪ್ರದೇಶದಲ್ಲಿ ಮಸೀದಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಶುಕ್ರವಾರದ ಪ್ರಾರ್ಥನೆಯ ವೇಳೆ ಮಧ್ಯಾಹ್ನ 1:30ರ ಸುಮಾರಿಗೆ ಮಸೀದಿಯ ಒಳಭಾಗದಲ್ಲಿದ್ದ ಸ್ಫೋಟಕಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಇಸ್ಲಾಮಿಕ್ ಸ್ಟೇಟ್ ಗುಂಪಿನ ಚಟುವಟಿಕೆಯ ಕೇಂದ್ರವಾದ ಪೂರ್ವ ಪ್ರಾಂತ್ಯದ ಸ್ಪಿನ್ ಘರ್ ಜಿಲ್ಲೆಯಲ್ಲಿ ಸ್ಫೋಟ ನಡೆದಿದೆ. ಇದುವರೆಗೆ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ

ಜಾಹೀರಾತು
ಜಾಹೀರಾತು
ಜಾಹೀರಾತು

“ಘಟನೆಯಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ” ಎಂದು ಸ್ಥಳೀಯ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.