Recent Posts

Monday, January 20, 2025
ಬಂಟ್ವಾಳ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 2020-21ನೇ ಸಾಲಿನ ವಿದ್ಯಾರ್ಥಿಗಳಿಗೆ ದೀಪಪ್ರದಾನ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡುತ್ತಾ ಇಂದಿನ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯವನ್ನು ತಿಳಿಸುವ ಶಿಕ್ಷಣದ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಕೇವಲ ವಿಷಯಗಳ ಶಿಕ್ಷಣ ಮಾತ್ರವಲ್ಲದೆ ತಮ್ಮ ಜೀವನ ಹೇಗಿರಬೇಕು ಎನ್ನುವ ಬದುಕಿನ ಶಿಕ್ಷಣ ನೀಡುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಈ ಶಾಲೆ ಶಿಕ್ಷಣದೊಂದಿಗೆ ಕಲಿಸಿಕೊಡುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ನಂತರ ಪ್ರೌಢ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ತಿಲಕಧಾರಣೆ ಮಾಡಿ ಹಿರಿಯರಿಂದ ಆಶೀರ್ವಾದ ಪಡೆದುಕೊಂಡರು. ಕಿರಿಯ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣ ಪಡೆಯುತ್ತಿರುವ ಹಿರಿಯ ವಿದ್ಯಾರ್ಥಿಗಳಿಗೆ ಹೂ ನೀಡಿ ಆಶೀರ್ವಾದ ಪಡೆದುಕೊಂಡರು. ಬಳಿಕ ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. 7ನೇ ತರಗತಿಯ ವಿದ್ಯಾರ್ಥಿಯಾದ ಪ್ರಾಣೇಶ್ ಪ್ರೇರಣಾ ಗೀತೆ ಹಾಡಿದನು.

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರಹ್ಮತ್ವ ಜ್ಞಾನಜ್ಯೋತಿ ದೀಪ. ಇದು ಕೇವಲ ಬೆಳಕು ನೀಡುವ ವಸ್ತುವಲ್ಲ, ಪರಬ್ರಹ್ಮ, ದಿವ್ಯಜ್ಯೋತಿ , ಪರಿಶುದ್ಧತೆ, ದಿವ್ಯಶಕ್ತಿ ಎಂಬ ಮಹೋನ್ನತ ಮತ್ತು ಪರಮಾದ್ಭುತ ಅಂಶವನ್ನು ಪ್ರತಿನಿಧಿಸುತ್ತದೆ. ಇಂತಹ ದೀಪಗಳು ಸದಾ ಉರಿಯುತಿರಲಿ ಎಂಬ ಸದಾಶಯದಿಂದ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ದೀಪವನ್ನು ಪ್ರದಾನ ಮಾಡಿದರಲ್ಲದೆ, ತಾವು ಕಲಿತ ಶಾಲೆಗೆ ಕೊಡುಗೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕೃಷ್ಣ ಇಲೆಕ್ಟ್ರಾನಿಕ್ಸ್ ಮಾಲಕರಾದ ಅಶ್ವಿನ್ ಕೃಷ್ಣ, ಕಾಮಧೇನು ಸೂಪರ್ ಮಾರ್ಕೆಟ್ ನ ಮಾಲಕರಾದ ಶಿವಪ್ರಸಾದ್, ಯಕ್ಷಪ್ರಿಯೆ ಎಂಬ ಬಿರುದು ಪಡೆದ ಯುನೈಟೆಡ್ ಟಯೋಟ ಕಂಪೆನಿಯಲ್ಲಿ ಸೀನಿಯರ್ ಸೇಲ್ಸ್ ಆಫೀಸರ್ ಆಗಿರುವ ಆರ್ಶಿಯಾ ತನು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಚೆನ್ನಪ್ಪ ಆರ್ ಕೋಟ್ಯಾನ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತಮಾಧವ, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್ ಎನ್. ಹಾಗೂ ಮುಖ್ಯೋಪಾದ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.