Friday, November 22, 2024
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ; ಮಂಗಳೂರಿನ ಯುವ ನಾಯಕ ವಿವೇಕ್ ರಾಜ್ ಪೂಜಾರಿ ಕಿವಿಮಾತು – ಕಹಳೆ ನ್ಯೂಸ್

ಮಂಗಳೂರು, ನ.14 : ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಯುವ ಉದ್ಯಮಿ ಹಾಗೂ ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್ ಹೇಳಿದ್ದಾರೆ.

ಸೈಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪ್ರಚಾರದ ಆಮಿಷಕ್ಕೆ ಒಳಗಾಗದೆ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂಬ ದೃಢ ಸಂಕಲ್ಪ ಹೊಂದಿರುವ ನಿಜವಾದ ಕಾಳಜಿಯುಳ್ಳವರು ಈ ಪರೀಕ್ಷೆಗೆ ಹಾಜರಾಗಬೇಕು” ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೈಂಟ್ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಮಾರ್ಟಿಸ್ ತಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ವಿನಯ್ ಕುಮಾರ್ ಕೆಬಿ ಮತ್ತಿತರರು ಉಪಸ್ಥಿತರಿದ್ದರು.