Saturday, November 23, 2024
ಸುದ್ದಿ

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ : 10 ಮಂದಿ ಬಂಧನ – ಕಹಳೆ ನ್ಯೂಸ್

ಕೋಲಾರ: ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠಕ್ಕೆ ಹೊರಟಿದ್ದ ದತ್ತ ಮಾಲಾಧಾರಿಗಳ ಬಸ್ ಮೇಲೆ ಕ್ಲಾಕ್‍ಟವರ್ ಬಳಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ರೋಷನ್ ಜಮೀರ್ (29), ಅಕ್ಬರ್ ಖಾನ್ (32), ಮುಕ್ರಂ ಪಾಷಾ (28), ಅಬ್ಬಾಸ್ ಅಲಿ (26), ಮೊಹಮ್ಮದ್ ನೌಷೀರ್ (29), ಶೋಯಬ್ ಸಿದ್ದಿಕ್ (30) ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಘಟನೆ ಸಂಬಂಧ 100ಕ್ಕೂ ಹೆಚ್ಚು ಆರೋಪಿಗಳನ್ನು ಗುರುತಿಸಲಾಗಿದೆ. ಸದ್ಯದಲ್ಲೇ ಅವರೆಲ್ಲರನ್ನೂ ಬಂಧಿಸುತ್ತೇವೆ ಎಂದು ಪೆÇಲೀಸರು ತಿಳಿಸಿದ್ದು, ಆರೋಪಿಗಳ ವಿರುದ್ಧ ಕಾನೂನೂಬಾಹಿರವಾಗಿ ಗುಂಪುಗೂಡುವಿಕೆ, ದೊಂಬಿ, ಮಾರಕಾಸ್ತ್ರಗಳಿಂದ ಹಲ್ಲೆ, ಕೊಲೆ ಯತ್ನ, ನಿಂದನೆ, ಅಪರಾಧ ಸಂಚು ಹಾಗೂ ಬಸ್ ಜಖಂಗೊಳಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

26 ಮಂದಿ ದತ್ತ ಮಾಲಾಧಾರಿಗಳು ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಸ್‍ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠಕ್ಕೆ ಹೊರಟಿದ್ದರು. ಇದಕ್ಕೂ ಸ್ವಲ್ಪ ಹೊತ್ತಿಗೂ ಮುನ್ನ ಕ್ಲಾಕ್‍ಟವರ್ ಬಳಿ ಅನ್ಯಕೋಮಿನ ಯುವಕರ 2 ಗುಂಪುಗಳ ನಡುವೆ ಘರ್ಷಣೆ ನಡೆದು ವಸೀಂ ಬೇಗ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿತ್ತು. ಅಕ್ಬರ್, ಇಜಾಜ್, ಜುಮ್ಮು ಮತ್ತು ಸಹಚರರು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ವಸೀಂ ಬೇಗ್‍ನ ಹೆಸರು ರೌಡಿ ಪಟ್ಟಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ನಗರ ಪ್ರದಕ್ಷಿಣೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಬಡಾವಣೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜತೆಗೆ ಧಾರ್ಮಿಕ ಕೇಂದ್ರಗಳು, ಪ್ರಾರ್ಥನಾ ಮಂದಿರಗಳ ಬಳಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.