Monday, January 20, 2025
ಸುಳ್ಯ

ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋದ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು- ಕಹಳೆ ನ್ಯೂಸ್

ಸುಳ್ಯ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆಯಲ್ಲಿ ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ ಮೃತಪಟ್ಟ ವಿದ್ಯಾರ್ಥಿನಿ.

ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ಶ್ರೇಯಾ ಹಿಂತಿರುಗಿ ಬಾರದ ಹಿನ್ನೆಲೆ, ಮನೆಯವರು ಶ್ರೇಯಾನನ್ನು ಹುಡುಕಿಕೊಂಡು ಕೆರೆಯ ಕಡೆ ಹೋಗಿದ್ದು, ಕೆರೆ ನೀರಿನಲ್ಲಿ ಶ್ರೇಯಾ ಶವವಾಗಿ ಪತ್ತೆಯಾಗಿದ್ದಾಳೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.