Sunday, November 24, 2024
ಸುದ್ದಿ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿರುವ ವಕೀಲ ರಾಜೇಶ್ ಮನೆಯಲ್ಲಿ ಶೋಧ-ಕಹಳೆ ನ್ಯೂಸ್

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಭಟ್ ಅವರ ಬಿಜೈನಲ್ಲಿರುವ ಮನೆಯನ್ನು ಪ್ರಕರಣದ ತನಿಖಾಧಿಕಾರಿಯಾದ ಎಸಿಪಿ ರಂಜಿತ್ ಬಂಡಾರು ಅವರ ನೇತೃತ್ವದ ಪೊಲೀಸರ ತಂಡ ಅಗತ್ಯವಾದ ದಾಖಲೆಗಳಿಗಾಗಿ ಶೋಧ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಖ್ಯಾತ ವಕೀಲರಾಗಿದ್ದ ರಾಜೇಶ್ ಭಟ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್‍ಶಿಪ್‍ಗೆ ಬಂದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ಪರಾರಿಯಾಗಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿರುವ ಪೊಲೀಸರು ಆತ ವಿದೇಶಕ್ಕೆ ಹೋಗದಂತೆ ತಡೆಯಲು ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಇದೀಗ ರಾಜೇಶ್ ಭಟ್ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮನೆ ಶೋಧ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು