Wednesday, January 22, 2025
ಬಂಟ್ವಾಳ

ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿದ ಅಪರಿಚಿತ ಮಹಿಳೆ- ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಮಹಿಳೆಯೋರ್ವಳು ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದಿದ್ದು, ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಘಟನೆ ನಡೆದ ಬಳಿಕ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ. ಡಿ. ನಾಗರಾಜ್ ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.