Wednesday, January 22, 2025
ಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಗೋಸಾಗಾಟ ಹಿಂದೂ ಜಾಗರಣ ವೇದಿಕೆಯ ಮಿಂಚಿನ ದಾಳಿ, ವಾಹನ ಸಹಿತ ಆರೋಪಿ ಪೋಲಿಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪ ಮತ್ತೊಂದು ಅಕ್ರಮ ಗೋಸಾಗಾಟ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಎರಡು ಗೋವುಗಳ ಸಾಗಿಸುತ್ತಿರುವ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ಲಭಿಸಿದ್ದು ಕೂಡಲೇ ಕಾರ್ಯ ಪ್ರವೃತ್ತರಾದ ಕೊಕ್ಕಡ ಜಾಗರಣ ವೇದಿಕೆಯ ಕಾರ್ಯಕರ್ತರು ತಿಪ್ಪೆಮಜಲು ಎಂಬಲ್ಲಿ ವಾಹನವನ್ನು ತಡೆದು, ಅಕ್ರಮ ಗೋಸಾಗಾಟ ವಾಹನ ಸಹಿತ ಆರೋಪಿಗಳನ್ನು ಪೋಲಿಸರಿಗೊಪ್ಪಿಸಿದ್ದಾರೆ. ನಂತರ ಧರ್ಮಸ್ಥಳ ಠಾಣೆಗೆ ಸುದ್ದಿ ಮುಟ್ಟಿಸಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಎರಡು ಗೋವು ಸಹಿತ ವಾಹನವನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಆರೋಪಿಯನ್ನೂ ಕೂಡ ವಶಕ್ಕೆ ಪಡೆಯಲಾಗಿದೆ. ವಿಕೃತ ರೀತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ನಡೆಯುತ್ತಲೇ ಇದ್ದು, ಪೋಲಿಸರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.