Wednesday, January 22, 2025
ಸುದ್ದಿ

‘ರಾಜಕೀಯದಿಂದ ದೂರ ಉಳಿಯುತ್ತೇನೆ, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ದುಡಿಯುತ್ತೇನೆ’ ಡಾ. ಎಂ.ಎನ್.ರಾಜೆಂದ್ರ ಕುಮಾರ್ – ಕಹಳೆ ನ್ಯೂಸ್

ಪುತ್ತೂರು: ಡಿಸೆಂಬರ್ ನಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೆಂದ್ರ ಕುಮಾರ್ ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು ನಿರ್ಧರಿಸಿ ಅಚ್ಚರಿ ಮೂಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಾಮೀಣ ಅಭಿವೃದ್ಧಿಯ ಹರಿಕಾರ ಸಹಕಾರಿ ರಂಗದ ಧುರಿಣ ಡಾಕ್ಟರ್ ಎಮ್ ಎನ್ ರಾಜೇಂದ್ರ ಕುಮಾರ್ ಅವರು, ಹಲವರ ಒತ್ತಡದ ಮೇರೆಗೆ ನಾನು ವಿಧಾನಸಭಾ ಪರಿಷತ್ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ, ನಾನು ಸಹಕಾರಿ ಸಂಘದ ಸಿದ್ಧಾಂತದಂತೆ ಚುನಾವಣೆಯಲ್ಲಿ ಭಾಗವಹಿಸುತ್ತೇನೆ ಎಂದಿದ್ದರು. ಆದರೆ ಇದೀಗ ವಿಧಾನ ಪರಿಷತ್ತ್ ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ತಾನು ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಡಾ. ಎಂ.ಎನ್.ರಾಜೆಂದ್ರ ಕುಮಾರ್ ಹೇಳಿದ್ದು, ಈ ನಿರ್ಧಾರದ ಹಿಂದೆ ಬೇರೆ ಯಾವುದೇ ಕಾರಣಗಳಿಲ್ಲ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು