ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಿ ಪಾಪಿಗಳು ಚರಂಡಿಯಲ್ಲಿ ಮೃತದೇಹ ಎಸೆದ ಅಮಾನವೀಯ ಘಟನೆ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದಿದೆ.
ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗಳು ನ.21ರ ಸಂಜೆ ನಾಲ್ಕು ಗಂಟೆಯಿಂದ ನಾಪತ್ತೆಯಾಗಿದ್ದಳು. ಬಾಲಕಿಗಾಗಿ ಕಾರ್ಖಾನೆ ಸೇರಿದಂತೆ ಹಲವೆಡೆ ಶೋಧ ಕಾರ್ಯ ನಡೆಸಲಾಗಿದ್ದು, ಬಳಿಕ ಕಾರ್ಖಾನೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರು ಅದಾಗಲೇ ಬಾಲಕಿ ಸಾವನ್ನಪ್ಪಿದ್ದಳು.
ಬಾಲಕಿಯನ್ನು ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದವರೇ ಹತ್ಯೆ ಮಾಡಿರುವ ಶಂಕೆಯನ್ನು ಆಕೆಯ ಪೋಷಕರು ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಹಲವರನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.