Wednesday, January 22, 2025
ಸುದ್ದಿ

ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಕನಕ ಜಯಂತಿ ಆಚರಣೆ- ಕಹಳೆ ನ್ಯೂಸ್

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ವಿಧಾನ ಪರಿಷತ್‍ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಚುನಾವಣೆ ನಿಗದಿಯಾಗಿರುವ ಕಾರಣ ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿದ್ದರಿಂದ ಈ ಬಾರಿ ಕನಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಮನುಷ್ಯನು ಜಾತಿ, ಕುಲವನ್ನು ಮೀರಿ ಬೆಳೆಯಬೇಕು ಎಂಬ ಸಂದೇಶ ನೀಡಿರುವ ಕನಕದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಾಣಿಕ್ಯ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಕರಾವಳಿ ಕುರುಬರ ಸಂಘ (ರಿ)ದ ಅಧ್ಯಕ್ಷ ಯಮನಪ್ಪ ನೋಟಗಾರ್, ಕರ್ನಾಟಕ ಕುರುಬರ ಸಂಘ (ರಿ)ದ ಸಹ ಕಾವ್ಯದರ್ಶಿ ಶಿವಾನಂದ ಯಲಜೇರಿ, ಮಂಗಳೂರು ಹಾಲುಮತದ ಅಧ್ಯಕ್ಷ ರಂಗಪ್ಪ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಅಧ್ಯಕ್ಷ ಧನು, ಕರ್ನಾಟಕ ಪ್ರದೇಶ ಕುರುಬರ ಪದವಿಧರ ಸಂಘ(ರಿ)ದ ಅಧ್ಯಕ್ಷ ತುಳಸಿರಾಜ್ ಹಾಗೂ ಇತರೆ ಗಣ್ಯರು ಕನಕದಾಸರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ವಂದಿಸಿರು.