ಪೆರ್ಡೂರು ಮೇಳದಿಂದ ಜನ್ಸಾಲೆ ರಾಘವೇಂದ್ರ ಆಚಾರ್ಯ ಔಟ್ ; ಸುಬ್ರಹ್ಮಣ್ಯ ಧಾರೇಶ್ವರ ಇನ್..! ಗಾನವೈಭವ, ನಾಟ್ಯ ವೈಭವ – ಮೇಳಕ್ಕೆ ಗೈರು…! ಯಜಮಾನರು ಕಂಗಾಲು..! ಅಭಿಮಾನಿಗಳಿಗೆ ನಿರಾಸೆ..! – ಕಹಳೆ ನ್ಯೂಸ್
ನ. 30ರಿಂದ ಮೇಳ ತಿರುಗಾಟ ಆರಂಭಿಸಲಿದ್ದು ಪ್ರೊ| ಪವನ್ ಕಿರಣ್ಕೆರೆ ಅವರ “ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ.
ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿದ್ದರು. ಆ ಬಳಿಕ ಮೇಳದ ನೂತನ ಪ್ರಸಂಗದ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ನಡೆದ ಬೆಳವಣಿಗೆಯಲ್ಲಿ ರಾಘವೇಂದ್ರ ಆಚಾರ್ಯ ಅವರು ಮೇಳದಲ್ಲಿ ಮುಂದುವರಿಯಲು ನಿರಾ ಕರಿಸಿದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ.
ಪೆರ್ಡೂರು ಮೇಳ ಬಿಟ್ಟ ಬಳಿಕ ಯಾವುದೇ ಮೇಳ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ.
– ಭಾಗವತ ಸುಬ್ರಹ್ಮಣ್ಯ ಧಾರೇಶ್ವರಹಗಲು ಹೊತ್ತಿನಲ್ಲಿ ಕೂಡ ಗಾನವೈಭವ, ತಾಳಮದ್ದಳೆಯಂತಹ ಕಾರ್ಯಕ್ರಮಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿದ್ದೇನೆ.
– ಜನ್ಸಾಲೆ ರಾಘವೇಂದ್ರ ಆಚಾರ್ಯ, ಭಾಗವತ
ಮೇಳದ ವ್ಯವಸ್ಥೆಗಳಿಗೆ ಜನ್ಸಾಲೆ ಅವರು ಒಪ್ಪದೇ ಇರುವುದರಿಂದ ಬದಲಾವಣೆ ಅನಿವಾರ್ಯ ಬಂತು. ಧಾರೇಶ್ವರ ಅವರು ಮೇಳದಲ್ಲಿ ಮುಂದುವರಿಯಲಿದ್ದಾರೆ. ಪ್ರದರ್ಶನ ಪೂರ್ವ ತಯಾರಿಗಳು ಅವರ ನಿರ್ದೇಶನದಲ್ಲಿ ಆರಂಭವಾಗಿವೆ.
– ವೈ. ಕರುಣಾಕರ ಶೆಟ್ಟಿ, ಪೆರ್ಡೂರು ಮೇಳದ ಯಜಮಾನರು