Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರ ಹಲ್ಲೆ ಖಂಡಿಸಿ ABVP ಪ್ರತಿಭಟನೆ ಬೆನ್ನಲ್ಲೆ ಕಾಲೇಜಿನಲ್ಲಿ ಚೂರಿ ಇರಿತ, ಗುಂಪುಚದುರಿಸಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೊಡೆದಾಟದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಕೆಲವರು ಪುತ್ತೂರಿನ ಖಾಸಗೀ ಆಸ್ಪತ್ರೆಯ ಹಾಗೂ ಮತ್ತೆ ಕೆಲವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಗೆ ನಡೆಯುತ್ತಿದ್ದಂತೆ ಪೊಲೀಸರು ಗುಂಪು ಸೇರಿರುವವರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.