Saturday, November 23, 2024
ಪುತ್ತೂರು

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಪೊಲೀಸ್ ಕಮೀಷನರ್ ಗೆ ಮನವಿ- ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಚಾನಲ್ ವರದಿಗಾರನ ಮೇಲೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್‌ಪಾಲ್ ಪೊಳಲಿ ಅವರ ತಲೆಗೆ ತೀವ್ರ ಗಾಯವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ಈ ಕುರಿತು ಯದುನಂದನ್ ಮೇಲೆ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರೂ, ಪಬ್ಲಿಕ್ ಟಿ.ವಿ.ಯ ದ.ಕ. ಜಿಲ್ಲಾ ವರದಿಗಾರರೂ ಆಗಿರುವ ಸುಖಪಾಲ್ ಪೊಳಲಿಯವರನ್ನು ಕೊಲೆಗೈಯ್ಯಲು ಯತ್ನಿಸಿರುವ ಘಟನೆ ಇಡೀ ಪತ್ರಕರ್ತ ಸಮೂಹದಲ್ಲಿ ಆತಂಕ ಸೃಷ್ಠಿಸಿದೆ. ಪತ್ರಿಕಾ ಮಾಧ್ಯಮದವರ ಮೇಲೆ ಪದೇ ಪದೇ ಹಲ್ಲೆ, ಕೊಲೆಯತ್ನದಂತಹ ಘಟನೆಗಳು ನಡೆಯುತ್ತಿರುವುದರಿಂದ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದವರು ಕರ್ತವ್ಯ ನಿರ್ವಹಿಸಲು ಭಯಪಡುವಂತಾಗಿದೆ. ಮಂಗಳೂರು ನಗರದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ತಾವು ಈಗಾಗಲೇ ತನಿಖೆ ಕೈಗೆತ್ತಿಕೊಂಡು ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹವಾಗಿದೆ. ಆದರೂ ಇದರ ಹಿಂದಿರುವ ಸಂಚನ್ನು ಬಯಲಿಗೆಳೆಯಬೇಕಿದೆ. ಹಾಗಾಗಿ ಈ ಘಟನೆಯ ಕುರಿತು ಇನ್ನಷ್ಟು ಸಮಗ್ರ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆದು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಿದೆ’ ಎಂದು ಮನವಿಯಲ್ಲಿ ತಿಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ, ಉಪಾಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಗಣೇಶ್ ಉಪಸ್ಥಿತರಿದ್ದರು.

ಆಸ್ಪತ್ರೆಗೆ ಭೇಟಿ: ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸುಖಪಾಲ್ ಪೊಳಲಿಯವರನ್ನು ಭೇಟಿ ಮಾಡಿದ ಯೂನಿಯನ್ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಪ್ರಧಾನ ಕಾರ್ಯದರ್ಶಿಗಳು ಸಾಂತ್ವನ ಹೇಳಿದರಲ್ಲದೆ ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.