Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನಿಗೆ ಜೀವ ಬೆದರಿಕೆ ಆರೋಪ..!! ; ಕಡಬ ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕಡಬ: ಹಿಂದೂ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ಠಾಣೆಯ ಮುಂದೆ ಜಮಾವಣೆಗೊಂಡ ಘಟನೆ ಕಡಬದಲ್ಲಿ ನಡೆದಿದೆ.

ಕೊಲೆ ಬೆದರಿಕೆ ಹಾಕಿದ ಯುವಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಠಾಣೆಯ ಮುಂದೆ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ‘ಮರ್ದಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ ಹೇಳಿ ನಾವು ನೋಡಿಕೊಳ್ಳುತ್ತೇವೆ, ನಮ್ಮ ಹುಡುಗಿಯರು ಮುಸ್ಲಿಂ ಯುವಕರ ಜೊತೆ ಕಾಂಟಾಕ್ಟ್ ಇಟ್ಟುಕೊಂದಿದ್ದರೆ ಹೇಳಿ ಅವರನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ಸ್ಟೇಟಸ್ ಹಾಕಿಕೊಂಡಿದ್ದರೆಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಪೋಲಿಸ್ ಠಾಣೆಯ ಎದುರು ಜಮಾವಣೆಗೊಂಡಿದ್ದಾರೆ ಎನ್ನಲಾಗಿದೆ.

ಕೊಲೆ ಬೆದರಿಕೆ ಹಾಕಿರುವ ಯುವಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಠಾಣೆಯ ಮುಂದೆ ಒಗ್ಗೂಡಿದ್ದಾರೆ ಎಂದು ತಿಳಿದು ಬಂದಿದೆ.