ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ನಿನ್ನೆ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಭವಿಷ್ಯವನ್ನು ಚಿಂತಿಸಿ ಬರೆದ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯರೂ ಆದರಿಸಬೇಕು ಎಂದು ಹೇಳಿದರು.
ಸ್ವಾತಂತ್ರ್ಯದ ನಂತರದ ಭಾರತವು ಹೀಗಿರಬೇಕು ಎನ್ನುವ ಪರಿಕಲ್ಪನೆಯೊಂದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಿದ್ಧಪಡಿಸಿದ ಸಂವಿಧಾನವನ್ನು ಗೌರವಿಸುವ ಕಾರ್ಯ ಆಗಬೇಕಿದೆ. ದೇಶದ ಪ್ರಗತಿಗೆ ಸಂವಿಧಾನವೆಂಬ ಪವಿತ್ರ ಗ್ರಂಥವು ದಾರಿದೀಪವಾಗಿದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ರಾಷ್ಟ್ರೀಯ ಅಂತಃ ಸತ್ವವನ್ನು ಅರಿತು ಡಾ. ಬಿ.ಆರ್ ಅಂಬೇಡ್ಕರ್ ಅವರ ನೀಡಿರುವ ಸಂವಿಧಾನವು ಸ್ವಾತಂತ್ರ್ಯವನ್ನು ಉಳಿಸಿಕೆuಟಿಜeಜಿiಟಿeಜಳ್ಳುವಲ್ಲಿ ಮಹತ್ತರದ ಪಾತ್ರ ವಹಿಸಿದೆ. ಇಂದಿನ ದಿನ ದೇಶಕ್ಕೆ ಸಂವಿಧಾನವನ್ನು ಸಮರ್ಪಿಸುವ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಮಹತ್ತರದ ಕೊಡುಗೆ ನೀಡಿದ ಅಂಬೇಡ್ಕರ್ ಅವರನ್ನು ಭಾರತವು ಎಂದಿಗೂ ಮರೆಯದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಕಾರ್ಪೋರೇಟರ್ ಪೂರ್ಣಿಮಾ, ಭರತ್, ಗಣೇಶ್ ಕುಲಾಲ್,ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಕಾರ್ಯದರ್ಶಿ ರೂಪಾ. ಡಿ ಬಂಗೇರ, ಉಪಾಧ್ಯಕ್ಷರಾದ ಕಿರಣ್ ರೈ, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ವಿನಯ್ ನೇತ್ರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್, ಬೋಜರಾಜ್ ಕೋಟ್ಯಾನ್, ಎಸ್.ಸಿ ಮೋರ್ಚಾ ಮಂಡಲಾಧ್ಯಕ್ಷ ರಘುವೀರ್ ಬಾಬುಗುಡ್ಡೆ, ಬಿಜೆಪಿ ಮುಖಂಡರಾದ ಮಂಗಳಾ ಆಚಾರ್, ಸಂದೇಶ್ ಗಾಂಧಿನಗರ, ಪ್ರಜ್ವಲ್ ಚಿಲಿಂಬಿ, ರಾಧಾಕೃಷ್ಣ ಕಂಕನಾಡಿ, ಸಂದೀಪ್ ಬೋಳೂರು, ಮೇಘರಾಜ್ ಬಲ್ಲಾಳ್ ಭಾಗ್, ಸುನಂಧ ಕೊಟ್ಟಾರ ಕ್ರಾಸ್ ಮುಂತಾದವರು ಉಪಸ್ಥಿತರಿದ್ದರು.