ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣ: ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿದ್ಯಾರ್ಥಿಗಳನ್ನು ಅವರವರ ಮನೆಗೆ ತಲುಪಿಸಿದ ಪೊಲೀಸರು- ಕಹಳೆ ನ್ಯೂಸ್
ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿದ್ಯಾರ್ಥಿಗಳನ್ನು ಪೊಲೀಸರು ಅವರವರ ಮನೆಗೆ ತಲುಪಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳನ್ನು ಅಪ್ರಾಪ್ತರೆಂಬ ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಮಕ್ಕಳ ಮತ್ತು ಮಹಿಳೆಯರ ಅಪ್ತ ಸಮಾಲೋಚನಾ ಆಸರೆ ಎಂಬ ವಿಭಾಗಕ್ಕೆ 7 ಮಂದಿ ನಗರ ಪೊಲೀಸ್ ಠಾಣೆಯ ಕರೆತಂದಿದ್ದ ಪೊಲೀಸರು ವಿದ್ಯಾರ್ಥಿಗಳ ಮನ ಪರಿವರ್ತನ ಕಾರ್ಯದ ಬಳಿಕ ಅವರವರ ಮನೆಗೆ ಸುರಕ್ಷಿತವಾಗಿ ಕಳುಹಿಸಿದರು.