Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರಚೋದನಾಕಾರಿ ಭಾಷಣ ಆರೋಪ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಕರ ವಿರುದ್ಧವೂ ಪುತ್ತೂರಿನಲ್ಲಿ ಎಫ್.ಐ.ಆರ್…!! – ಕಹಳೆ ನ್ಯೂಸ್

ಪುತ್ತೂರು: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷಯ ತಿಳಿಯುತ್ತಿದಂತೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ಹಿಂದೂ ಮುಖಂಡರ ಮೇಲೆ ಇಲ್ಲದ ಸಲ್ಲದ ಆರೋಪ ಹೊರಿಸಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 25 ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷದ್,ಬಜರಂಗದಳ, ಹಿಂದೂ ಜಾಗರಣ ವೇದಿಕೆಯಲ್ಲಿ ಸಕ್ರಿಯವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಮತ್ತು ಸಾಮಾಜಿಕ ಕಾರ್ಯದಲ್ಲಿ ಹಾಗೂ ಅವರ ಸಮೀಪ ಎಲ್ಲಿಯೇ ಅಪಘಾತವಾದರೂ ಅವರನ್ನು ಶೀಘ್ರವಾಗಿ ತನ್ನ ಕಾರಿನಲ್ಲಿಯೇ ಆಸ್ಪತ್ರೆಗೆ ಸಾಗಿಸಿ, ಸಂಕಷ್ಟದಲ್ಲಿರುವವರಿಗೆ ತಕ್ಷಣ ಸ್ಪಂದಿಸುತ್ತಿದ್ದ ಸಂಘ ಪರಿವಾರದ ಪ್ರಮುಖ ಅರುಣ್ ಕುಮಾರ್ ಪುತ್ತಿಲ ರವರ ವಿರುದ್ಧ ಪ್ರಕರಣ ದಾಖಲಾಗಿರುವುದು ಹಿಂದೂ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದೂ ವಿದ್ಯಾರ್ಥಿಗಳ ಪರ ವಹಿಸಿದ್ದರು ಎಂದು ಹಲವು ಮುಸ್ಲಿಂ ಸಂಘಟನೆಗಳು ಮುಖಂಡರ ಹೆಸರು ಹೇಳಿ ಕೇಸು ದಾಖಲಿಸುವಂತೆ ಪ್ರತಿಭಟನೆ ಕೂಡ ನಡೆಸಿದ್ದರು.

ಒಟ್ಟಾರೆ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಹಲವಾರು ತಿರುವುಗಳನ್ನು ಪಡೆಯುತ್ತಿದ್ದು, ಇದೀಗ ಹಿಂದೂ ಮುಖಂಡರ ವಿರುದ್ಧ ಪ್ರಕರಣ ಕೂಡ ದಾಖಲಾಗಿದ್ದು, ಇದರ ಮುಂದಿನ ಬೆಳವಣಿಗೆ ಯಾವ ರೀತಿಯಾಗಿರುತ್ತದೆ ಎಂದು ಕಾದು ನೋಡಬೇಕಿದೆ.