Recent Posts

Sunday, January 19, 2025
ಸುದ್ದಿ

ಸಮಾಜಮುಖಿ ಮಾಸಪತ್ರಿಕೆ “ಅಮೃತ ಪ್ರಕಾಶ”ದ ನಾಲ್ಕನೆ ವರ್ಷದ ಸಂಚಿಕೆ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : “ಅಮೃತ ಪ್ರಕಾಶ”ಮಾಸಪತ್ರಿಕೆ ಯ ನಾಲ್ಕನೆ ವರ್ಷದ ಪ್ರಯುಕ್ತ ಸಂಚಿಕೆ ಬಿಡುಗಡೆ ಸಮಾರಂಭವು ಮೇ 21ರಂದು ಮಂಗಳೂರು ಪತ್ರಿಕಾಭವನದಲ್ಲಿ ನಡೆಯಿತು. ಬಡಗಬೆಟ್ಟು ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಜನರಲ್ ಮ್ಯಾನೇಜರ್ ಜಯಕರ ಶೆಟ್ಟಿ ಇಂದ್ರಾಳಿ ಸಂಚಿಕೆ ಬಿಡುಗಡೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದರು.ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮುಖ್ಯ ಅತಿಥಿಯಾಗಿದ್ದರು.ಸಾಹಿತಿ ಹಾಗೂ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ,ಉಪ ಸಂಪಾದಕ ಡಾ.ಕಾಸರಗೋಡು ಅಶೋಕ್ ಕುಮಾರ್ ವಂದಿಸಿದರು. ಸಾಹಿತಿ ಎನ್.ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು