Recent Posts

Sunday, January 19, 2025
ರಾಜಕೀಯ

ಮೈತ್ರಿಕೂಟದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕೆ. ಇಂದು ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ – ಕಹಳೆ ನ್ಯೂಸ್

ಬೆಂಗಳೂರು :  ಕರ್ನಾಟಕ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಂದರೆ  ಮೇ 22ರಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ  ಹೊರಟು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳವನ್ನು  8:30ಕ್ಕೆ ತಲುಪಲಿದ್ದು, ಶ್ರೀ ಮಂಜುನಾಥ ಸ್ವಾಮಿಯವರನ್ನು ದರ್ಶನವನ್ನು ಮಾಡಲಿದ್ದಾರೆ. ಧರ್ಮಸ್ಥಳದ  ದೇವಳದ ಭೇಟಿ ನಂತರ  ಅವರು 11:45ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಯ ಆದಿಗುರು ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠಕ್ಕೆ ತೆರಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ತಮಿಳು ನಾಡಿನ ಶ್ರೀರಂಗಂ ಭೇಟಿ ನೀಡಿ ಅಲ್ಲಿ ಶ್ರೀ ದೇವರ ದರ್ಶನವನ್ನು ಪಡೆದಿದ್ದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಎಲ್ಲಾ ಪ್ರಮುಖ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ನ ರಾಜ್ಯ ಜಂಟಿ ಕಾರ್ಯದರ್ಶಿ ಇಬ್ರಾಹಿಮ್ ಗೋಳಿಕಟ್ಟೆ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು