Friday, September 20, 2024
ರಾಜಕೀಯ

Breaking News : ನಾನು ಫುಟ್ಬಾಲ್ ಆಡೋನಲ್ಲ, ಚೆಸ್ ಆಡಿ ಚೆಕ್ ಕೊಡುವನು ; ಹೈಕಮಾಂಡ್‍ಗೆ ಡಿಕೆಶಿ ಟಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಪಟ್ಟು ಹಿಡಿದಿದ್ದ ಎಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹೈ ಕಮಾಂಡ್ ನಡೆಯ ಬಗ್ಗೆ ಪರೋಕ್ಷವಾಗಿ ಅಸಮಾಧಾನವನ್ನು ಪ್ರಕಟಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಒಂದು ಸ್ಥಾನ ಗೆದ್ದವರಿಗೂ, ಇಡೀ ರಾಜ್ಯ ಸುತ್ತಿ ಗೆಲ್ಲಿಸಿಕೊಂಡು ಬಂದವರಿಗೂ ಒಂದೆನಾ? ಪರಮೇಶ್ವರ್ 8 ವರ್ಷದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಬಹಳ ದಿನಗಳಿಂದ ಪರಮೇಶ್ವರ್ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತೇನೆ ಅಂತಾ ಹೇಳುತ್ತಾ ಬಂದಿದ್ದಾರೆ. 8 ವರ್ಷದಿಂದ ಕೆಲವರು ಆ..ಆ…ಆ.. ಬಾಯಿ ಬಿಟ್ಟುಕೊಂಡು ಕೂತಿದ್ದಾರೆ. ನಾನು ಬಾಯಿ ಬಿಟ್ಟುಕೊಂಡು ಕಾಯುವ ವ್ಯಕ್ತಿತ್ವ ನನ್ನದಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಎಲ್ಲದಕ್ಕೂ ಮುಹೂರ್ತ, ಕಾಲ ಕೂಡಿ ಬರಬೇಕು. ರಾಜಕಾರಣಕ್ಕೆ ಬಂದಿದ್ದೂ ಸನ್ಯಾಸತ್ವ ತೆಗೆದುಕೊಳ್ಳಕ್ಕೆ ಅಲ್ಲ, ರಾಜಕಾರಣ ಮಾಡಲಿಕ್ಕೆ ಬಂದಿದ್ದೇನೆ. ಪಕ್ಷದ ಹೈಕಮಾಂಡ್ ಯಾವ ನಿರ್ಣಯ ತೆಗೆದುಕೊಳ್ಳುತ್ತೆ ಅಂತಾ ಕಾದು ನೋಡೋಣ ಅಂತಾ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಲಿಂಗಾಯತ ಮುಖಂಡರೊಬ್ಬರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಚಿಂತಿಸಿತ್ತು. ಆದ್ರೆ ಡಿ.ಕೆ.ಶಿವಕುಮಾರ್ ಅವರ ಬಿಗಿ ಪಟ್ಟಿನಿಂದಾಗಿ ಒಬ್ಬರೇ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪಕ್ಷದ ಪವರ್ ಫುಲ್ ಮುಖಂಡರಾಗಿರುವ ಡಿ.ಕೆ.ಶಿವಕುಮಾರ್ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವರಾಗುವ ಅವಕಾಶ ನೀಡಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಿದ್ದು ಈ ಸ್ಥಾನ ಡಿಕೆ ಶಿವಕುಮರ್ ಅವರಿಗೆ ಸಿಗುವ ಸಾಧ್ಯತೆಯಿದೆ.